Tuesday, July 29, 2025

ಸತ್ಯ | ನ್ಯಾಯ |ಧರ್ಮ

ಜೈಲಿನಲ್ಲಿದ್ದ ಕೇಜ್ರಿವಾಲರನ್ನು ವಶಕ್ಕೆ ಪಡೆದ ಸಿಬಿಐ: ರಾಷ್ಟ್ರಪತಿ ಭಾಷಣ ಬಹಿಷ್ಕಾರಕ್ಕೆ ನಿರ್ಧಾರ

ನವದೆಹಲಿ: ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಪುನಃ ಬಂಧಿಸಿದ್ದು, ದೆಹಲಿ ನ್ಯಾಯಾಲಯವು ಅವರನ್ನು ಮೂರು ದಿನಗಳವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ. ಇದನ್ನು ವಿರೋಧಿಸಿ ಎಎಪಿ ಸಂಸದರು ಸಂಸತ್ತಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಇಂದು(ಗುರುವಾರ) ನರೇಂದ್ರ ಮೋದಿ ಅವರ ಹೊಸ ಸರ್ಕಾರದ ಆದ್ಯತೆಗಳ ಬಗ್ಗೆ ಮಾತನಾಡಲಿದ್ದಾರೆ. ರಾಷ್ಟ್ರಪತಿಯವರು 18ನೇ ಲೋಕಸಭೆ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐನೊಂದಿಗೆ ಮಾತನಾಡಿದ ಎಎಪಿ ನಾಯಕ ಸಂದೀಪ್ ಪಾಠಕ್, ‘ರಾಷ್ಟ್ರಪತಿ ಮತ್ತು ಸಂವಿಧಾನವೇ ಸರ್ವೋಚ್ಚ. ನ್ಯಾಯದ ಹೆಸರಿನಲ್ಲಿ ಸರ್ವಾಧಿಕಾರ ನಡೆದಾಗ ಧ್ವನಿ ಎತ್ತುವುದು ಮುಖ್ಯ. ಇಂದು ನಾವು ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಪ್ರತಿಭಟಿಸುತ್ತೇವೆ ಮತ್ತು ರಾಷ್ಟ್ರಪತಿ ಅವರ ಭಾಷಣವನ್ನು ಬಹಿಷ್ಕರಿಸುತ್ತೇವೆ’ ಎಂದರು.

‘ಇಂಡಿಯಾ’ ಕೂಟದ ಇತರ ಪಕ್ಷಗಳು ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸುತ್ತವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪಾಠಕ್, ನಾವು ಈ ಬಗ್ಗೆ ಮೈತ್ರಿಕೂಟದ ಉಳಿದ ಪಕ್ಷಗಳೊಂದಿಗೆ ಚರ್ಚೆ ನಡೆಸಿಲ್ಲ. ಆದರೆ ನಮ್ಮ ಪಕ್ಷ ರಾಷ್ಟ್ರಪತಿ ಅವರ ಭಾಷಣವನ್ನು ಬಹಿಷ್ಕರಿಸಲಿದೆ ಎಂದು ಹೇಳಿದರು.

ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಬುಧವಾರ ಬಂಧಿಸಿದೆ. ದೆಹಲಿ ನ್ಯಾಯಾಲಯವು ಅವರನ್ನು ಮೂರು ದಿನಗಳವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page