ನೀಟ್ ಪೇಪರ್ ಲೀಕ್ ಪ್ರಕರಣ: ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

ದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (CBI) ಹೊಸದಾಗಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಪೇಪರ್ ಲೀಕ್ ಪ್ರಕರಣದಲ್ಲಿ ಬಂಧಿತರಾಗಿರುವ 13 ಮಂದಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿ, ಅವರ ವಿರುದ್ಧ ಸಿದ್ಧಪಡಿಸಲಾದ ಚಾರ್ಜ್‌ಶೀಟ್ ಅನ್ನು ಮಂಗಳವಾರ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಸಿಬಿಐನ ಆರ್ಥಿಕ ಅಪರಾಧಗಳ ವಿಭಾಗವು ಸಲ್ಲಿಕೆ ಮಾಡಿದೆ.

ಇದರೊಂದಿಗೆ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ವಿಶೇಷ ಫಾಸ್ಟ್‌ಟ್ರಾಕ್ ನ್ಯಾಯಾಲಯದ ಮುಂದೆ ಈ ಚಾರ್ಜ್‌ಶೀಟ್ ವಿಚಾರಣೆಗೆ ಬರಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳ ಕುರಿತು ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ. ಪೇಪರ್ ಲೀಕ್ ಪ್ರಕರಣದಲ್ಲಿ ಬಂಧಿತರಾಗಿರುವ 13 ಮಂದಿ ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರೆಲ್ಲರೂ ಖಾಸಗಿ ವ್ಯಕ್ತಿಗಳಾಗಿದ್ದಾರೆ (ಖಾಸಗಿ ಸಬ್ಜೆಕ್ಟ್ ಎಕ್ಸ್‌ಪರ್ಟ್‌ಗಳು, ತರಬೇತಿ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮಧ್ಯವರ್ತಿಗಳು). ಚಾರ್ಜ್‌ಶೀಟ್‌ನಲ್ಲಿ ಯಾವುದೇ ಸರ್ಕಾರಿ ಅಧಿಕಾರಿಗಳ ಹೆಸರುಗಳಿಲ್ಲದಿರುವುದು ಗಮನಾರ್ಹವಾಗಿದೆ. ಆರೋಪಿಗಳ ಜಾಮೀನು ಅರ್ಜಿಯ ಮೇಲಿನ ವಿಚಾರಣೆಯನ್ನು ನ್ಯಾಯಾಲಯವು ಆಗಸ್ಟ್ 3 ರಂದು ಕೈಗೆತ್ತಿಕೊಳ್ಳಲಿದೆ.

Related Articles

ಇತ್ತೀಚಿನ ಸುದ್ದಿಗಳು