Wednesday, October 8, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ಅಬಕಾರಿ ಪ್ರಕರಣ: ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಿದ ಸಿಬಿಐ

ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ರೌಸ್ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಇದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯಾಗಿದ್ದು, ಇದೇ ಪ್ರಕರಣದಡಿ ಇಡಿ ಬಂಧನದಲ್ಲಿರುವ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆಪಾದಿತ ಮದ್ಯ ನೀತಿ ಹಗರಣದಲ್ಲಿ ದಾಖಲಾದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಉಪ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ…

Related Articles

ಇತ್ತೀಚಿನ ಸುದ್ದಿಗಳು

You cannot copy content of this page