ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅಡಿಯಲ್ಲಿ ತನಿಖೆ ನಡೆಸುತ್ತಿರುವ ಸಿಬಿಐ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
2017 ರ ಅಗಸ್ಟ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಅವರಿಗೆ ಸೇರಿದ ಕಛೇರಿ ಮತ್ತು ಮನೆಯ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು. ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆ ಶಿವಕುಮಾರ್ ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳಲ್ಲಿ ಬಗ್ಗೆ ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಅದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಈ ಪ್ರಕರಣದ ಹೆಚ್ಚಿನ ತನಿಖೆ ಕೈಗೊಂಡು ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.
ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.