ಬೆಂಗಳೂರಿನಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದ ಸಿಬಿಐ

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರನ್ನು CBI ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ಅವರಿಗೆ ಬಂಧನದ ಭೀತಿ ಎದುರಾಗಿತ್ತು.

ಕೋರ್ಟ್ ನಲ್ಲಿ ಜಾಮೀನು ರದ್ದಾಗುತ್ತಿದ್ದಂತೆಯೇ ಕೋರ್ಟ್ ಸೂಚನೆಗೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ.

ಇಂದು ಬೆಳಿಗ್ಗೆ ಪ್ರಕರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ವಿನಯ್ ಕುಲಕರ್ಣಿ ಬಂದಿದ್ದರು. ಅವರು ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.

Related Articles

ಇತ್ತೀಚಿನ ಸುದ್ದಿಗಳು