Monday, November 10, 2025

ಸತ್ಯ | ನ್ಯಾಯ |ಧರ್ಮ

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ; ನಟ ದರ್ಶನ್ ಆಪ್ತ ಧನ್ವೀರ್‌ ವಶಕ್ಕೆ ಪಡೆದ ಸಿಸಿಬಿ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಎಂಜಾಯ್‌ಮೆಂಟ್ ವಿಡಿಯೋಗಳ ಬೆನ್ನಲ್ಲೇ ಈಗ ಜೈಲಿನ ವಿಡಿಯೋ ಬಿಡುಗಡೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಆಪ್ತ ಧನ್ವೀರ್‌ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಡಿಯೋ ರಿಲೀಸ್ ಮಾಡಿದ ಅನುಮಾನ ವ್ಯಕ್ತವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಭಾನುವಾರ ಸಂಜೆಯಿಂದ ಧನ್ವೀರ್‌ಗೆ ಸಿಸಿಬಿ ಅಧಿಕಾರಿಗಳು ಸಂಪೂರ್ಣವಾಗಿ ಮೊಬೈಲ್ ಪರಿಶೀಲಿಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆತನ ಮೊಬೈಲ್ ರಿಟ್ರೀವ್ ಗಾಗಿ ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದಾರೆನ್ನಲಾಗಿದೆ.

ಜೈಲಿನ ವೀಡಿಯೊಗಳ ರಿಲೀಸ್ ಆದ ಬಗ್ಗೆ ಅನುಮಾನದ ಮೇರೆಗೆ ಧನ್ವೀರ್‌ ರನ್ನು ಪ್ರಶ್ನಿಸಲಾಗುತ್ತಿದ್ದು, ಇದುವರೆಗೂ ಧನ್ವೀರ್‌ ಯಾವುದೇ ಮಾಹಿತಿ ನೀಡಲು ನಿರಾಕರಿಸುತ್ತಿದ್ದಾರೆನ್ನಲಾಗಿದೆ.

ಪರಪ್ಪನ ಅಗ್ರಹಾರದ ಜೈಲಿನಲ್ಲಿ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಕೆ ಮಾಡಿರುವ ಹಾಗೂ ಕೆಲ ಆರೋಪಿಗಳು ಡ್ರಿಂಕ್ಸ್ ಮಾಡಿ ಡಾನ್ಸ್ ಮಾಡಿ ಎಂಜಾಯ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಜೈಲಿನಲ್ಲಿ ಇಷ್ಟೆಲ್ಲಾ ಬೆಳವಣಿಗೆಯನ್ನು ಗಮನಿಸುವುದಾದರೆ ಜೈಲು ಅಧಿಕಾರಿಗಳ ಉನ್ನತ ಹುದ್ದೆಗಾಗಿ ಪೈಪೋಟಿ ನಡೆಯುತ್ತಿದೆಯೇ , ವಿಡಿಯೋ ರಿಲೀಸ್ ಮಾಡೊ ಮೂಲದ ದಾಳವಾಗಿಸಲಾಗ್ತಿದ್ಯಾ.? ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಧ್ಯದ ಮಾಹಿತಿಯಂತೆ ಪ್ರಕರಣ ಕುರಿತು ತನಿಖೆ ನಡೆಸಲು  ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಒಂದು ತಿಂಗಳಲ್ಲಿ ಸಮಗ್ರ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page