Friday, December 19, 2025

ಸತ್ಯ | ನ್ಯಾಯ |ಧರ್ಮ

ಶತಮಾನೋತ್ಸವ ಸಂಭ್ರಮದಲ್ಲಿ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ – ಸದಸ್ಯ ಸುರೇಶ್

ಹಾಸನ : ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಡಿ. 20, 21, ಮತ್ತು 22 ಮೂರು ದಿನಗಳ ಕಾಲ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ 100 ನೇ ವರ್ಷದ ಶತಮಾನೋತ್ಸವವನ್ನು ಆಚರಿಸಲಾಗುತ್ತಿದೆ. ಎಂದು ಸಂಸ್ಥೆಯ ಸದಸ್ಯ ಸುರೇಶ್ ತಿಳಿಸಿದರು.

ಕಾಫಿ ಮಂಡಳಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಭಾರತ ಸರಕಾರದ ಅಧೀನದಲ್ಲಿರುವ ಸಂಸ್ಥೆಯ ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಹಲವು ಗಣ್ಯರು ಆಗಮಿಸಲಿದ್ದಾರೆ. ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿ. 20 ರಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪಲ್ಲಾದ್ ಜೋಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಸರ್ಕಾರದ ಇಂಧನ ಸಚಿವ ಕೆ.ಜೆ.ಜಾರ್ಜ್, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಿಧಾನಪರಿಷತ್ ಹಾಗೂ ಲೋಕಸಭಾ ಸದಸ್ಯರು, ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.

ಡಿ. 21 ರಂದು ಕಾಫಿ ಸಂಶೋಧನೆ, ರೈತರ ಅಭಿವೃದ್ಧಿ, ತೋಟಗಾರಿಕೆ ಕ್ಷೇತ್ರದ ಪ್ರಗತಿಗೆ ಶತಮಾನ ಕಾಲದಿಂದ ಸಿ.ಸಿ.ಆರ್.ಐ ನೀಡಿರುವ ಕೊಡುಗೆಗಳನ್ನು ಕುರಿತು ವಿವಿಧ ಗೋಷ್ಠಿಗಳು ನಡೆಯಲಿದೆ ಎಂದರು.

ಡಿ.23 ರಂದು ಅಂತಿಮವಾಗಿ ಸಮಾರೋಪ ಸಮಾರಂಭ ನಡೆಯಲಿದ್ದು ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗಮಿಸಿಲಿದ್ದಾರೆ. ಎಂದು ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page