Home ಜನ-ಗಣ-ಮನ ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರದ ಅನುಮೋದನೆ

‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರದ ಅನುಮೋದನೆ

0

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಇಡೀ ದೇಶದಲ್ಲಿ ಏಕಕಾಲಕ್ಕೆ ಒಂದು ದೇಶ ಒಂದು ಚುನಾವಣೆ ವರದಿ ಸಲ್ಲಿಸಿತ್ತು. ಇಂದು ಅದರ ಸಮಗ್ರ ಮಾಹಿತಿಯನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.

8,626 ಪುಟಗಳ ಸಮಗ್ರ ವರದಿಯನ್ನು ಈಗಾಗಲೇ ಸಲ್ಲಿಕೆ ಮಾಡಿದ್ದು, ಸಮಿತಿಯು ಸುಮಾರು ಏಳು ತಿಂಗಳ ಸಮಾಲೋಚನೆ ಮತ್ತು ಸಂಶೋದನೆ ನಡೆಸಿದೆ ಎಂದು ಸಮಿತಿ ತಿಳಿಸಿದೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:

  • ಅಮಿತ್ ಶಾ , ಕೇಂದ್ರ ಗೃಹ ಸಚಿವ
  • ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
  • ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್
  • 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್
  • ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್
  • ಹಿರಿಯ ವಕೀಲ ಹರೀಶ್ ಸಾಳ್ವೆ
  • ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

You cannot copy content of this page

Exit mobile version