ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕೇಂದ್ರಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳ ಕುರಿತು ಮಹಿಳಾ ಫಲಾನುಭವಿಗಳೊಂದಿಗೆ ಅಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮವನ್ನು, ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಉದ್ಘಾಟಿಸಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವ ಕ್ರಿಶನ್ ಪಾಲ್ ಗುರ್ಜರ್‌ರವರು, ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಉಜ್ವಲ ಯೋಜನೆ, ಗರೀಬ್ ಕಲ್ಯಾಣ್ ಯೋಜನೆ, ಅವಾಸ್ ಯೋಜನೆ ಸೇರಿದಂತೆ ವಿವಿಧ ಯೋಜನೆಯ ದೇಶದಲ್ಲಿ ಜಾರಿಯಾಗಿದ್ದು, ರಾಜ್ಯದ ಮಹಿಳೆಯರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ 5 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಎರಡನೇ ಬಾರಿ ಗರ್ಭಿಣಿಯಾಗುವ ಮಹಿಳೆಯರಿಗೂ ಸಹಾಯಧನ ನೀಡುವ ಯೋಜನೆಯ ವಿಸ್ತರಣೆಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಮಾಜಿ ಸಚಿವ ಸೋಮಶೇಖರ್, ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲ ಕೃಷ್ಣ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.