ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಎರಡು ರೂಪಾಯಿ ಏರಿಕೆಯ ಬೆನ್ನಲ್ಲೇ ಪೆಟ್ರೋಲಿಯಂ ಉತ್ಪನ್ನವಾದ LPG ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರಿಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ.
ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸೋಮವಾರ ತಿಳಿಸಿದಂತೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ದರ ಏರಿಸಲಾಗಿದೆ, ಈ ಏರಿಕೆ ಉಜ್ವಲಾ ಯೋಜನೆಯ ಫಲಾನುಭವಿಗಳಿಗೂ ಅನ್ವಯಿಸಲಿದೆ ಎಂದು ತಿಳಿಸಿದ್ದಾರೆ.
ಈ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ.