Sunday, July 27, 2025

ಸತ್ಯ | ನ್ಯಾಯ |ಧರ್ಮ

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.

ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.

ಸಂತ್ರಸ್ತ ಮಹಿಳೆಗೆ ರಕ್ಷಣೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು.

ಅಮಿತ್ ಶಾ ರಾಜಕೀಯ ಹೇಳಿಕೆ

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು.

ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದರು.

ಅಧಿಕಾರ ಉಳಿಸಿಕೊಳ್ಳಲು, ಬಿಜೆಪಿ ಮಾಡಬಾರದ್ದನ್ನು ಮಾಡುತ್ತಿದೆ

ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page