ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೇಂದ್ರವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಶಾಕ್ ನೀಡಿದೆ.
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಅನುಮತಿ ನೀಡಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಸಾರ್ವಜನಿಕ ಪ್ರತಿನಿಧಿಗಳನ್ನು ವಿಚಾರಣೆ ಮಾಡಲು ಪೂರ್ವಾನುಮತಿ ಪಡೆಯುವಂತೆ ಇಡಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ, ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಲು ಇಡಿ ಕಳೆದ ತಿಂಗಳು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಂದ ಅನುಮತಿ ಕೋರಿತ್ತು.
ED ಯ ಕೋರಿಕೆಯನ್ನು LG ಕಚೇರಿ ಅನುಮೋದಿಸಿದೆ. ಇದರೊಂದಿಗೆ, ಇಡಿ ಅಧಿಕಾರಿಗಳು ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯದ ಗಮನಕ್ಕೆ ತಂದರು, ಅದು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಹಸಿರು ನಿಶಾನೆ ತೋರಿಸಿತು. ಕೇಜ್ರಿವಾಲ್ ಜೊತೆಗೆ ಇದೇ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಹಿರಿಯ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಹ ವಿಚಾರಣೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ.