Friday, October 25, 2024

ಸತ್ಯ | ನ್ಯಾಯ |ಧರ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ – ಭದ್ರತೆಯನ್ನು ಸ್ಥಾಪಿಸುವಲ್ಲಿ ಕೇಂದ್ರ ವಿಫಲವಾಗಿದೆ – ರಾಹುಲ್

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಮತ್ತು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವುದು ತೀವ್ರ ದುಃಖವನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಟ್ವಿಟರಿನಲ್ಲಿ ಯೋಧರಿಗೆ ಶೃದ್ಧಾಂಜಲಿ ಗೌರವ ಸಲ್ಲಿಸುವುದರ ಜೊತೆಗೆ ಅವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಈ ದಾಳಿಯನ್ನು ಹೇಡಿಗಳ ದಾಳಿ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ. ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ, ಸೈನಿಕರ ಮೇಲಿನ ದಾಳಿ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಹತ್ಯೆಗಳು ನಡೆಯುತ್ತಿವೆ ಎಂದು ರಾಹುಲ್ ಹೇಳಿದ್ದಾರೆ. ಎನ್‌ಡಿಎ ಸರ್ಕಾರದ ನೀತಿಗಳ ವೈಫಲ್ಯದಿಂದಾಗಿ ರಾಜ್ಯವೇ ಅಪಾಯದಲ್ಲಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಕೂಡಲೇ ಈ ವಿಚಾರದ ಹೊಣೆ ಹೊತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಸೇನೆ ಮತ್ತು ನಾಗರಿಕರಿಗೆ ಭದ್ರತೆ ಒದಗಿಸುವುದು ಅನಿವಾರ್ಯವಾಗಿದೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ಕುರಿತು ರಾಹುಲ್ ಗಾಂಧಿಯವರ ಪ್ರತಿಕ್ರಿಯೆಯು ದೇಶವನ್ನು ರಕ್ಷಿಸುವ ಸೈನಿಕರಿಗೆ ಬೆಂಬಲ ವ್ಯಕ್ತಪಡಿಸುವುದು, ಕೇಂದ್ರ ಸರ್ಕಾರದ ಹೊಣೆಗಾರಿಕೆ ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಶ್ರಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page