Wednesday, August 14, 2024

ಸತ್ಯ | ನ್ಯಾಯ |ಧರ್ಮ

ಬ್ರಾಡ್‌ಕಾಸ್ಟಿಂಗ್ ಮಸೂದೆಯ ಕರಡು ಹಿಂಪಡೆದ ಕೇಂದ್ರ; ಸಮಾಲೋಚನೆಯ ನಂತರ ಹೊಸ ಕರಡು

ಪ್ರಸಾರ ಸೇವೆಗಳ ನಿಯಂತ್ರಣ ಮಸೂದೆಯ ವಿಷಯದಲ್ಲಿ ಕೇಂದ್ರ ಸರ್ಕಾರ ಹಿಂದೆ ಸರಿದಿದೆ. ಈಗಾಗಲೇ ಸಾರ್ವಜನಿಕರಿಗೆ ಲಭ್ಯವಿರುವ ಕರಡಿನ ಬಗ್ಗೆ ಡಿಜಿಪಬ್ ಮತ್ತು ಎಡಿಟರ್ಸ್ ಗಿಲ್ಡ್‌ನಂತಹ ಸಂಸ್ಥೆಗಳಿಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ.

ಈ ಕರಡು ಸಿದ್ಧಪಡಿಸುವಾಗ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಸಂಸ್ಥೆಗಳ ಸಲಹೆ ಪಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದರೊಂದಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸೋಮವಾರ ಮಹತ್ವದ ಘೋಷಣೆ ಮಾಡಿದೆ. ಅಕ್ಟೋಬರ್ 15ರವರೆಗೆ ಕರಡು ಪ್ರತಿ ಕುರಿತು ಸಮಾಲೋಚನೆ ನಡೆಸಿ ಸಲಹೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದೆ.

ಸಮಾಲೋಚನೆಯ ನಂತರ ಹೊಸ ಕರಡನ್ನು ಪ್ರಕಟಿಸಲಾಗುವುದು ಎಂದು ಅದು ಹೇಳಿದೆ. ಪ್ರಸ್ತುತ ಈ ಕರಡು ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸುದ್ದಿ ಪ್ರಸಾರಕ್ಕೆ ನಿರ್ಬಂಧ ಹೇರಲು ಮತ್ತು ಸ್ವತಂತ್ರ ಪತ್ರಕರ್ತರ ಧ್ವನಿಯನ್ನು ಹತ್ತಿಕ್ಕುವ ಉದ್ದೇಶವನ್ನು ಹೊಂದಿದೆ ಎಂದು ಸುದ್ದಿ ಸಂಸ್ಥೆಗಳು ಆರೋಪಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page