ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು(ಶನಿವಾರ) ಪ್ರಕಟಗೊಂಡಿದೆ.
ಎಂಜಿನಿಯರಿಂಗ್, ಕೃಷಿ, ಪಶುಸಂಗೋಪನೆ, ಆಯುಷ್, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಜೂನ್ 16 ಮತ್ತು 17 ರಂದು ಸಿಇಟಿ ಪರೀಕ್ಷೆಯನ್ನು ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ನಡೆಸಲಾಗಿತ್ತು.ಈ ಪರೀಕ್ಷೆಯಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಹಾಜರಾಗಿದ್ದು ಇಂದು ಫಲಿತಾಂಶ ಪ್ರಕಟಣೆಗೊಂಡಿದೆ.
ಒಟ್ಟು 83 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, 88 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಈ ಭಾರಿ ಸಿಇಟಿ ಫಲಿತಾಂಶದಲ್ಲಿ ತೇರ್ಗಡೆ ಹೊಂದಿದ್ದು. ಈ ಬಾರಿಯು ವಿಧ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ.
ಇಂಜಿನಿಯರಿಂಗ್ ಕೋರ್ಸ್ಗೆ 1,71,656 ರ‍್ಯಾಂಕ್, ಕೃಷಿ ಕೋರ್ಸ್ಗೆ 1,39,968 ರ‍್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ‍್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ‍್ಯಾಂಕ್ ಬಂದಿದೆ.
ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ www.karresults.nic.in ಹಾಗೂ www.karresults.nic.in/ ವೆಬ್‌ಸೈಟ್‌ನಲ್ಲಿ ನೋಡಬಹುದು.