Home ಬ್ರೇಕಿಂಗ್ ಸುದ್ದಿ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ

ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ

0

ಬಿಗ್‌ಬಾಸ್‌ ಮನೆಯಿಂದ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಹೊರಗೆ ಬಂದಿದ್ದಾರೆ. ಬಿಜೆಪಿ ಪಕ್ಷದಲ್ಲಿ ಎಂಎಲ್​​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಗೆ ಹಾಜರಾದ ಚೈತ್ರ ಕುಂದಾಪುರ ವಿಚಾರಣೆ ಎದುರಿಸಿದ್ದಾರೆ.

ಕುಂದಾಪುರದ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚಿಸಿದ್ದ ಆರೋಪ ಹೊತ್ತ ಚೈತ್ರಾ ಕುಂದಾಪುರ ನಿರಂತರ ಕೋರ್ಟ್ ಗೆ ಹಾಜರಾಗಬೇಕಿತ್ತು. ಈ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಬಿಗ್​ಬಾಸ್ ಮನೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದಾರೆ. ವಾರಂಟ್ ರೀಕಾಲ್ ಮಾಡಿಕೊಂಡು ಮತ್ತೆ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.

ಟಿಕೆಟ್‌ ವಂಚನೆ ಸಂಬಂಧ ಪ್ರಕರಣ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಚೈತ್ರಾ ಸೇರಿದಂತೆ ಶ್ರೀಕಾಂತ್, ಹಿರೇ ಹಡಗಲಿಯ ಹಾಲಸ್ವಾಮಿ ಮಠದ ಸ್ವಾಮೀಜಿಯ ಹೆಸರು ಕೂಡ ಕೇಳಿ ಬಂದಿತ್ತು.

ಇತ್ತೀಚೆಗೆ ವಿಚಾರಣೆಗೆ ಹಾಜರಾಗಬೇಕೆನ್ನುವ ವಾರೆಂಟ್‌ ಬಂದಿತ್ತು. ಈ ಕಾರಣದಿಂದ ಚೈತ್ರಾ ಅವರು ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಅವರ ನೇರವಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ.

ಸದ್ಯ ವಿಚಾರಣೆಯನ್ನು ಕೋರ್ಟ್‌ ಜನವರಿ 13ಕ್ಕೆ ಮುಂದೂಡಿದೆ. ಚೈತ್ರಾ ಅವರು ವಿಚಾರಣೆ ವೇಳೆ ಯಾರೊಂದಿಗೂ ಮಾತನಾಡಿಲ್ಲ ಎನ್ನಲಾಗಿದ್ದು, ಅಲ್ಲಿಂದ ಅವರು ನೇರವಾಗಿ ಬಿಗ್‌ ಬಾಸ್‌ ಮನೆಗೆ ಹೋಗಲಿದ್ದಾರೆ ಎನ್ನಲಾಗಿದೆ.

You cannot copy content of this page

Exit mobile version