Home ರಾಜ್ಯ ಧಾರವಾಡ ಮುಸ್ಲಿಂ ಮಹಿಳೆಯರ ಕುರಿತು ಅಸಂಬದ್ಧ ಹೇಳಿಕೆ: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಮುಸ್ಲಿಂ ಮಹಿಳೆಯರ ಕುರಿತು ಅಸಂಬದ್ಧ ಹೇಳಿಕೆ: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ (Suo Motu) ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ತುಕಾರಾಂ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಏಪ್ರಿಲ್ 8ರಂದು ಧಾರವಾಡದ ಸುಭಾಷ್ ರಸ್ತೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸೂಲಿಬೆಲೆ, “ಮುಸ್ಲಿಂ ಹುಡುಗಿಯರು ಗಂಡಸರಿಗಿಂತಲೂ ಅಪಾಯಕಾರಿ. ಮುಸ್ಲಿಂ ಹುಡುಗರೊಂದಿಗೆ ಸ್ನೇಹ ಮಾಡಿದರೂ ಪರವಾಗಿಲ್ಲ, ಆದರೆ ಮುಸ್ಲಿಂ ಹೆಣ್ಣು ಮಕ್ಕಳನ್ನು ಮಾತ್ರ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಡಿ” ಎಂಬರ್ಥದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಭಾಷಣವು ಒಂದು ನಿರ್ದಿಷ್ಟ ಸಮುದಾಯದ ಮಹಿಳೆಯರ ಬಗ್ಗೆ ದ್ವೇಷ ಭಾವನೆ ಮೂಡಿಸುವಂತಿದೆ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಧಾರ್ಮಿಕ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತಂದಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

You cannot copy content of this page

Exit mobile version