ಚಾಲಕನಿಂದ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ

ಮಡಿಕೇರಿ: ಶಾಲೆ ಮತ್ತು ಮನೆಗೆ ಕರೆತರುವ ಚಾಲಕನೊರ್ವ 12 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಕುಶಾಲನಗರದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಆರೋಪಿ ರಹೀಂ ನೆಲ್ಯಹುದಿಕೇರಿ ಬೆಟ್ಟದಕಾಡು ನಿವಾಸಿಯಾಗಿದ್ದು, ಬಾಲಕಿ ಮೇಲೆ ಲೈಂಗಿಕ ಕಿರುಕಳ ನೀಡಿದ್ದಾನೆ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಲಿಸರು ಆರೋಪಿಯನ್ನು ಬಂಧಿಸಿ ಜೀಪಿನಲ್ಲಿ ಠಾಣೆಗೆ ಕರೆತರುವಾಗ ಆರೋಪಿ ಚಲಿಸುತ್ತಿರುವ ವಾಹನದಿಂದ ಹಾರಿ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ರಹೀಂನನ್ನು ಆದಷ್ಟು ಬೇಗ ಬಂಧಿಸುತ್ತೆವೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು