Monday, July 28, 2025

ಸತ್ಯ | ನ್ಯಾಯ |ಧರ್ಮ

ಚಾಮರಾಜನಗರ: ರಥೋತ್ಸವ ವೇಳೆ ಗಾಲಿ ಮುರಿದು ಬಿದ್ದ ರಥ, ಹೊಸ ರಥ ನಿರ್ಮಾಣಕ್ಕೆ ಕ್ರಮ

ಚಾಮರಾಜನಗರ: ರಥೋತ್ಸವದ ವೇಳೆ ಗಾಲಿ ಮುರಿದು ರಥ ನೆಲಕ್ಕೆ ಬಿದ್ದಿರುವ ಘಟನೆ ಬುಧವಾರ ಚಾಮರಾಜನಗರ ತಾಲ್ಲೂಕಿನ ಚೆನ್ನಪ್ಪನಪುರದಲ್ಲಿ ನಡದಿದೆ.

ಚೆನ್ನಪ್ಪನಪುರದ ವೀರಭದ್ರೇಶ್ವರ ದೇವಾಲಯದಲ್ಲಿ ನಡೆದ ರಥೋತ್ಸವದಲ್ಲಿ ಈ ಅವಘಡ ಸಂಭಿವಿಸಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಿನ್ನೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸಚಿವ ವಿ.ಸೋಮಣ್ಣ

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣರವರು, ಇದು ಮುಮ್ಮಡಿ ಕೃಷ್ಣರಾಜ ಒಡೆಯರ್‌ ನಿರ್ಮಿಸಿದ್ದ ಪುರಾತನ ದೇವಾಲಯವಾಗಿದೆ. ಇಲ್ಲಿ ಅವಘಡ ಸಂಭವಿಸಿದೆ ಆದರೆ ಯಾವುದೇ ಅನಾಹುತವಾಗಿಲ್ಲ ಎಂದು ತಿಳಿಸಿದರು.

ಈ ಹಿನ್ನಲೆಯಲ್ಲಿ ಮುಂದಿನ 15 ದಿನಗಳೊಳಗೆ ಹೊಸ ರಥ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು, ಜೊತೆಗೆ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್‌. ಸುಂದರ್‌ ರಾಜ್‌ ಮತ್ತಿತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page