Wednesday, November 6, 2024

ಸತ್ಯ | ನ್ಯಾಯ |ಧರ್ಮ

ಬದಲಾದ ಟ್ರೆಂಡ್ : ಮತ್ತೊಮ್ಮೆ ಅಧ್ಯಕ್ಷಗಾದಿಯತ್ತ ಟ್ರಂಪ್ ನಡೆ

ಬಾರಿ ಜಿದ್ದಾಜಿದ್ದಿನ ಪೈಪೋಟಿಯ ಕಣವಾಗಿರುವ ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಈಗ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗಿಂತ ಬಹಳ ಮುಂದಿದ್ದರು. ಸಧ್ಯ ಟ್ರಂಪ್ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 11.45ರ ಗಂಟೆಯವರೆಗಿನ ಸುದ್ದಿ ಪ್ರಕಾರ ಕಮಲಾ ಹ್ಯಾರಿಸ್ 213 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದರೆ, ಡೊನಾಲ್ಡ್‌ ಟ್ರಂಪ್‌ 251 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದರು. ಈಗ ಇಲ್ಲಿಯವರೆಗೂ ಕಮಲಾ ಹ್ಯಾರಿಸ್ 214 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್‌ ಟ್ರಂಪ್‌ ಅವರು ಅವರಿಗಿಂತ 264 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಒಟ್ಟು 538 ಎಲೆಕ್ಟೋರಲ್ ಮತಗಳಲ್ಲಿ 270 ಮತಗಳನ್ನು ಪಡೆದವರು ಬಹುಮತ ಪಡೆಯುತ್ತಾರೆ. ಈ ಅಂಕಿ ಅಂಶಗಳ ಆಧಾರದಲ್ಲಿ ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಬಹುಮತ ಪಡೆದು ಅಧಿಕಾರಕ್ಕೆ ಬರೋದು ಬಹುತೇಕ ಖಚಿತವಾಗಿದೆ.

ಆ ಮೂಲಕ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಬಾರಿ ಅಂತರದ ಸೋಲು ಕಾಣಲಿದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page