Monday, October 21, 2024

ಸತ್ಯ | ನ್ಯಾಯ |ಧರ್ಮ

ಚನ್ನಪಟ್ಟಣ ಜೆಡಿಎಸ್‌ಗೆ ಸೇರಿದ್ದು, ಅಭ್ಯರ್ಥಿ ಯಾರೆನ್ನುವುದನ್ನು ಅವರು ತೀರ್ಮಾನಿಸಲಿದ್ದಾರೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು : ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು.ಬಿಜೆಪಿ ಜೆಡಿಎಸ್ ಒಟ್ಟಾಗಿ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ. ಸಿಪಿ ಯೋಗೇಶ್ವರ್ ಸ್ಪರ್ಧೆಯ ಬಗ್ಗೆ ದೆಹಲಿಯವರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿ ತೀರ್ಮಾನಿಸುವಲು ಆಗುವುದಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೋ ಅದರಂತೆ ಮಾಡುತ್ತೇವೆ. ಜೆಡಿಎಸ್ ಚಿನ್ಹೆಯ ಅಡಿ ಬಿಜೆಪಿಯವರು ಸ್ಪರ್ಧಿಸುವ ಯೋಚನೆ ಇಲ್ಲ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅವರು ಯಾರನ್ನು ಬೇಕಾದರೂ ನಿಲ್ಲಿಸಬಹುದು ಎಂದರು.

ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಅನೌನ್ಸ್ ಮಾಡಿಕೊಳ್ಳಬಹುದು ಅಂತಾ ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರೇ ಘೋಷಣೆ ಮಾಡ್ತಾರೆ. ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ ಎಂದು ಸ್ಪಷ್ಟಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page