Wednesday, April 30, 2025

ಸತ್ಯ | ನ್ಯಾಯ |ಧರ್ಮ

ಅತ್ಯಾಚಾರ ಪ್ರಕರಣ : ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಅತ್ಯಾಚಾರ ಆರೋಪ ಪ್ರಕರಣದ ಸಂಬಂಧ ಶಾಸಕ ಮುನಿರತ್ನ ಸೇರಿ ಏಳು ಜನರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ತನಿಖೆಯ ನಂತರ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 3,000 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಶಾಸಕ ಮುನಿರತ್ನ ಸೇರಿದಂತೆ ಆಪ್ತ ಸುಧಾಕರ್‌, ಇನ್‌ಸ್ಪೆಕ್ಟರ್‌ ಐಯ್ಯಣ್ಣ ರೆಡ್ಡಿ, ಲೋಹಿತ್‌ ಗೌಡ, ಶ್ರೀನಿವಾಸ್‌ ಸೇರಿ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಗುರುತಿಸಲ್ಪಟ್ಟ ಆರೋಪಿಗಳು ಪೊಲೀಸರು ಸೇರಿ, ಪ್ರಮುಖ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಸೆರೆ ಹಿಡಿದಿರುವುದಲ್ಲದೆ, ಅವುಗಳನ್ನಿಟ್ಟುಕೊಂಡು ತಮ್ಮ ಪರ ಕೆಲಸ ಮಾಡುವಂತೆ ಬ್ಲ್ಯಾಕ್‌ ಮೇಲ್ ಮಾಡಿದ ಬಗ್ಗೆಯೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜೊತೆಗೆ ಎಚ್‌ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಬಿಜೆಪಿ ಶಾಸಕ ಮುನಿರತ್ನರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page