ಚೀತಾ ಹೆಲಿಕಾಪ್ಟರ್ ಪತನ; ಪೈಲಟ್ ಸಾವು

ಭಾರತೀಯ ಸೇನೆಗೆ ಸೇರಿದ್ದ ಚೀತಾ ಹೆಲಿಕಾಪ್ಟರ್ ಇಂದು ಅರುಣಾಚಲ ಪ್ರದೇಶದ ತವಾಂಗ್ ಪ್ರಾಂತ್ಯದಲ್ಲಿ ಪತನಗೊಂಡಿದೆ. ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಒಬ್ಬರು ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬ ಪೈಲಟ್ ಕೂಡಾ ಗಂಭೀರ ಗಾಯಗೊಂಡಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ಬಗ್ಗೆ ಭಾರತೀಯ ಸೇನೆ ಮಾಹಿತಿ ನೀಡಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ದೈನಂದಿನ ಗಸ್ತಿನಲ್ಲಿದ್ದ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಇದ್ದರು. ಗಂಭೀರ ಗಾಯಗೊಂಡ ಲೆಫ್ಟಿನೆಂಟ್ ಕರ್ನಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು