Home ಬೆಂಗಳೂರು ಮುಖ್ಯಮಂತ್ರಿ ಹೈ ಓಲ್ಟೇಜ್ ಕರೆಂಟ್ ಇದ್ದಹಾಗೆ ಮುಟ್ಟಿದ್ರೆ ಸುಟ್ಟೋಗ್ತೀರ – ಮುನಿರತ್ನ

ಮುಖ್ಯಮಂತ್ರಿ ಹೈ ಓಲ್ಟೇಜ್ ಕರೆಂಟ್ ಇದ್ದಹಾಗೆ ಮುಟ್ಟಿದ್ರೆ ಸುಟ್ಟೋಗ್ತೀರ – ಮುನಿರತ್ನ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದರು.ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್‌. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಎಂದರು.

 

   ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಆಚೆ ಹೋದರೆ ಪರಿಣಾಮ ಏನಾಗುತ್ತದೆ ಅನ್ನುವುದು ಅವರ ನಾಯಕರಿಗೇ ಗೊತ್ತಿಲ್ಲ. ಅವರ ಜತೆ ಐದು ವರ್ಷ ಕೆಲಸ ಮಾಡಿದ್ದೇನೆ. ಅವರ ಒಡನಾಟ ಇಟ್ಟುಕೊಂಡಿದ್ದೇನೆ. ಅವರ ಮನಸ್ಥಿತಿ ಗೊತ್ತಿದೆ. ಅವರ ಶಕ್ತಿಯನ್ನೂ ನೋಡಿದ್ದೇನೆ ಎಂದರು. ಸಿದ್ದರಾಮಯ್ಯ 2 ಗಂಟೆಗೆ ಭಾಷಣಕ್ಕೆ ಬರುತ್ತಾರೆ. ಅಂದರೆ 6 ಗಂಟೆಯವರೆಗೆ ಜನ ಕಾಯುತ್ತಾರೆ. ಅವರ ಒಂದು ಕರೆಗೆ 10 ಲಕ್ಷ ಜನ ಸೇರುತ್ತಾರೆ. ಅಂತಹ ಶಕ್ತಿ ಇರುವವರು ಕಾಂಗ್ರೆಸ್‌ನಲ್ಲಿ ಬೇರೆ ಯಾರಿದ್ದಾರೆ ಎಂದೂ ಪ್ರಶ್ನಿಸಿದರು.

   ಸಿದ್ದರಾಮಯ್ಯ ಹೊರತಾಗಿ ಕಾಂಗ್ರೆಸ್‌ ಶೂನ್ಯ. ರಾಜಕಾರಣದಲ್ಲಿ ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಮುಡಾ ಹಗರಣವನ್ನು ಸಿಬಿಐಗೆ ಕೊಟ್ಟರೆ ಸಾಕು, ಸಿದ್ದರಾಮಯ್ಯ ಅವರನ್ನು ಸಿಲುಕಿಸಿದರೆ ಸಾಕು, ಅಂತಾ ಕಾಯ್ತಾ ಇರುವವರು ಕಾಂಗ್ರೆಸ್‌ನಲ್ಲಿ ಇದ್ದಾರೆ. ಕೇಜ್ರಿವಾಲ್‌ ರೀತಿ ಸಿದ್ದರಾಮಯ್ಯ ಬಂಧನಕ್ಕೆ ಒಳಗಾದರೆ, ತಾವು ಮುಖ್ಯಮಂತ್ರಿ ಆಗಬಹುದು ಎಂದು ಕೆಲವರು ಕಾಯ್ತಾ ಕುಳಿತ್ತಿದ್ದಾರೆ ಎಂದರು.

  ಸಿದ್ದರಾಮಯ್ಯ ಕಾಂಗ್ರೆಸ್‍ನಲ್ಲಿದ್ರೆ 135 ಸೀಟು, ಆಚೆ ಹೋದ್ರೆ ಶೂನ್ಯವಾಗಲಿದೆ. ಸಿದ್ದರಾಮಯ್ಯ ಅವರನ್ನು ಇಳಿಸಿದರೆ ಆರೇ ತಿಂಗಳಿಗೆ ಚುನಾವಣೆ ಬರುತ್ತೆ. ಹಾಗಾಗಿ ನಮ್ಮ ಪಕ್ಷದಲ್ಲಿ ಎಲ್ರೂ ಒಗ್ಗಟ್ಟಾಗಬೇಕು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಇಳಿಸೋ ಪ್ರಯತ್ನ ನಡೀತಿದೆ ಎಂದು ಹೇಳಿದ್ದಾರೆ

You cannot copy content of this page

Exit mobile version