Home ರಾಜ್ಯ ಬಿಜೆಪಿ ಅವಧಿಯಲ್ಲಿ ಮಕ್ಕಳ ಭವಿಷ್ಯ ಕೆಟ್ಟದಾಗಿತ್ತು – ಮಧು ಬಂಗಾರಪ್ಪ

ಬಿಜೆಪಿ ಅವಧಿಯಲ್ಲಿ ಮಕ್ಕಳ ಭವಿಷ್ಯ ಕೆಟ್ಟದಾಗಿತ್ತು – ಮಧು ಬಂಗಾರಪ್ಪ

ಶಿವಮೊಗ್ಗ : ನೀಟ್ ಪರೀಕ್ಷೆಯ (NEET UG 2026) ಅಕ್ರಮಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಅವರು ಕೇಂದ್ರದಲ್ಲಿರುವ ಬಿಜೆಪಿ (Bjp) ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಇಂದಿನ ವಿದ್ಯಾರ್ಥಿ ಸಮೂಹದ ನಾಳಿನ ಬದುಕಿಗೆ ಮಾರಕ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಲೋಪದೋಷಗಳಿಲ್ಲದೆ ತಾವೇ ಖುದ್ದಾಗಿ ಮೂರು ಪರೀಕ್ಷೆಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾಗಿ ನೆನಪಿಸಿದ ಅವರು, ಕೇಂದ್ರದ ಡಬಲ್ ಇಂಜಿನ್ ಆಡಳಿತ ಪೋಷಕರ ಪರಿಶ್ರಮ ಮತ್ತು ಮಕ್ಕಳ ಶ್ರಮವನ್ನು ಅಸಹಾಯಕತೆಯ ಬೀದಿಗೆ ತಳ್ಳಿದೆ ಎಂದು ದೂರಿದರು. ಈ ಅನ್ಯಾಯದ ವಿರುದ್ಧ ಕಾಂಗ್ರೆಸ್ ಪಕ್ಷ ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ರಾಮನ ಹೆಸರಿನಲ್ಲಿ ರಾಜಕೀಯ ಲಾಭ ಮತ್ತು ಭ್ರಷ್ಟಾಚಾರ ನಡೆಸಲಾಗುತ್ತಿದೆ ಎಂದು ಹರಿಹಾಯ್ದ ಅವರು, ಸಂವಿಧಾನ ನೀಡಿರುವ ಅತ್ಯುನ್ನತ ಹಕ್ಕಾದ ಮತದಾನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸುವುದು ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.

You cannot copy content of this page

Exit mobile version