Thursday, July 31, 2025

ಸತ್ಯ | ನ್ಯಾಯ |ಧರ್ಮ

ಚಿಲುಮೆ ಹಗರಣ : ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಮತದಾರರ ಪಟ್ಟಿಯ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆಯ ಮೇಲಿನ ಆರೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸಧ್ಯ ಈ ಆದೇಶದಿಂದ ರಾಜ್ಯ ಬಿಜೆಪಿ ನಾಯಕರಲ್ಲಿ ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕರು ನುಡಿದಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರು ಚಿಲುಮೆ ಎಂಬ ಖಾಸಗಿ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಕ್ಕೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಕೋರಿದ್ದರು. ಈ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮತದಾರರ ಜಾಗೃತಿ ಹಾಗೂ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹ ಮಾಡಿದೆ ಎಂದು ಖಾಸಗಿ ವಾಹಿನಿ ತನಿಖಾ ವರದಿ ಪ್ರಕಟಿಸಿತ್ತು. ಈ ವರದಿಯ ಆಧಾರದ ಮೇಲೆ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರ ಹೆಸರುಗಳು ಕೇಳಿ ಬಂದಿತ್ತು.

ಬಿಬಿಎಂಪಿಯಿಂದ ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page