Friday, April 4, 2025

ಸತ್ಯ | ನ್ಯಾಯ |ಧರ್ಮ

ಚೀನಾ ಭಾರತದ 4 ಸಾವಿರ ಚದರ ಕಿಲೋ ಮೀಟರ್ ಭೂಭಾಗವನ್ನು ಆಕ್ರಮಿಸಿಕೊಂಡಿದೆ: ರಾಹುಲ್

ದೆಹಲಿ: ನಮ್ಮ ದೇಶದ 4,000 ಚದರ ಕಿಲೋಮೀಟರ್ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆರೋಪಿಸಿದರು. ಗುರುವಾರ ಲೋಕಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

“ನಮ್ಮ ಭೂಪ್ರದೇಶದ 4,000 ಚದರ ಕಿಲೋಮೀಟರ್ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ. ಆದರೆ, ನಮ್ಮ ವಿದೇಶಾಂಗ ಕಾರ್ಯದರ್ಶಿ (ವಿಕ್ರಮ್ ಮಿಶ್ರಿ) ಅವರು ಎರಡೂ ದೇಶಗಳ ಸಂಬಂಧದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲು ಚೀನಾ ರಾಯಭಾರಿಯೊಂದಿಗೆ ಕೇಕ್ ಕತ್ತರಿಸುವುದನ್ನು ನೋಡಿ ನನಗೆ ಆಘಾತವಾಯಿತು.

“ನನ್ನ ಪ್ರಶ್ನೆ ಏನೆಂದರೆ, ಚೀನಾ ಅಷ್ಟು ಭೂಮಿಯನ್ನು ವಶಪಡಿಸಿಕೊಂಡಿದೆಯೇ ಎನ್ನುವುದು” ಎಂದು ರಾಹುಲ್ ಕಳವಳ ವ್ಯಕ್ತಪಡಿಸಿದರು.

ರಾಹುಲ್ ಆರೋಪಗಳನ್ನು ಬಿಜೆಪಿ ಸಂಸದ ಅನುರಾಗ್ ಠಾಕೂರ್ ನಿರಾಕರಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಚೀನಾ ಭಾರತದ ಭೂಪ್ರದೇಶವನ್ನು ಆಕ್ರಮಿಸಿಕೊಂಡಿತ್ತು ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page