ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ‘ಮಾಸ್ಕ್ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಸಿ.ಎನ್. ಚಿನ್ನಯ್ಯ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಅಗತ್ಯ ಷರತ್ತುಗಳು ಪೂರೈಸದ ಕಾರಣ ಚಿನ್ನಯ್ಯ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ತಿಂಗಳಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧಿತರಾಗಿದ್ದ ಅವರು ಇದೀಗ ಬಿಡುಗಡೆ ಭಾಗ್ಯ ಪಡೆದಿದ್ದಾರೆ.
ಚಿನ್ನಯ್ಯ ಅವರ ಪತ್ನಿ ಮಲ್ಲಿಕಾ ಅವರು ನಿನ್ನೆ ಒಂದು ಲಕ್ಷ ರೂಪಾಯಿ ಬಾಂಡ್ ಸಲ್ಲಿಸಿದ್ದು, ಜೊತೆಗೆ ಇಬ್ಬರು ಜಾಮೀನುದಾರರು ಹಾಗೂ ಒಬ್ಬ ಶ್ಯೂರಿಟಿಯನ್ನು ಕೋರ್ಟ್‌ಗೆ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಡಿಸೆಂಬರ್ 17ರಂದು ಚಿನ್ನಯ್ಯ ಅವರ ಬಿಡುಗಡೆಗೆ ಆದೇಶ ಹೊರಡಿಸಿತು.
ಜಾಮೀನು ಷರತ್ತುಗಳನ್ನು ಪೂರೈಸಿದ 23 ದಿನಗಳ ಬಳಿಕ ಚಿನ್ನಯ್ಯ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಪತ್ನಿ ಮಲ್ಲಿಕಾ ಅವರು ಶ್ಯೂರಿಟಿ ನೀಡಿದ್ದಾರೆ.
ಬಿಡುಗಡೆಯಾದ ಬಳಿಕ ಚಿನ್ನಯ್ಯ ಅವರು ಪತ್ನಿ ಮಲ್ಲಿಕಾ ಹಾಗೂ ಸಹೋದರ ರತ್ನಾ ಅವರೊಂದಿಗೆ ಮನೆಗೆ ತೆರಳಿದ್ದಾರೆ. ಈ ಬೆಳವಣಿಗೆ ಅವರ ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.
