ಚಿತ್ರದುರ್ಗ: ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, ಮೂವರು ಗಂಭೀರ

ಚಿತ್ರದುರ್ಗ: ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಹೆದ್ದಾರಿ-150ರಲ್ಲಿ ದಾವಣಗೆರೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ಅಸ್ಥಿಪಂಜರದಂತೆ ನಜ್ಜುಗುಜ್ಜಾಗಿದೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರು ಮತ್ತು ಗಾಯಾಳುಗಳ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು