Friday, December 26, 2025

ಸತ್ಯ | ನ್ಯಾಯ |ಧರ್ಮ

ಚಿತ್ರದುರ್ಗ ಅಪಘಾತ: ಚಿಕಿತ್ಸೆ ಫಲಿಸದೆ ಬಸ್ ಚಾಲಕ ರಫೀಕ್ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

ಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು ಸಮೀಪ ನಡೆದ ಲಾರಿ ಮತ್ತು ಖಾಸಗಿ ಬಸ್ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಮೊಹಮ್ಮದ್ ರಫೀಕ್ ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ರಫೀಕ್ ಅವರಿಗೆ ತೀವ್ರವಾದ ಗಾಯಗಳಾಗಿದ್ದವು. ಅಪಘಾತದ ಬೆನ್ನಲ್ಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (Karnataka Institute of Medical Sciences – KIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಮೊದಲು ಘಟನಾ ಸ್ಥಳದಲ್ಲಿ ಐವರು ಮಹಿಳಾ ಪ್ರಯಾಣಿಕರು ಮತ್ತು ಕಂಟೇನರ್ ಲಾರಿಯ ಚಾಲಕ ಮೃತಪಟ್ಟಿದ್ದರು. ಈಗ ಬಸ್ ಚಾಲಕನ ಸಾವಿನೊಂದಿಗೆ ಈ ದುರಂತದಲ್ಲಿ ಬಲಿಯಾದವರ ಒಟ್ಟು ಸಂಖ್ಯೆ 7ಕ್ಕೆ ತಲುಪಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page