Home ಅಪರಾಧ ಬಿಕ್ಲು ಶಿವ ಹತ್ಯೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನೀಡಿರುವ ರಕ್ಷಣೆಯನ್ನು ರದ್ದುಪಡಿಸುವಂತೆ ಕೋರಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನೀಡಿರುವ ರಕ್ಷಣೆಯನ್ನು ರದ್ದುಪಡಿಸುವಂತೆ ಕೋರಿ ಸಿಐಡಿ ಹೈಕೋರ್ಟ್‌ಗೆ ಅರ್ಜಿ

0

ಬೆಂಗಳೂರು: ಶಿವರಾಜ್ ಅಲಿಯಾಸ್ ಬಿಕ್ಲು ಶಿವ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ರದ್ದುಗೊಳಿಸುವಂತೆ ಕೋರಿ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್ (ಸಿಐಡಿ) ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಸಿಐಡಿಯ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು ವಿಚಾರಣೆಯನ್ನು ಮುಂದೂಡಿದರು.

ಜುಲೈ 15ರಂದು ಭಾರತಿ ನಗರದ ಮೀನಿ ಅವೆನ್ಯೂ ರಸ್ತೆಯಲ್ಲಿ ಶಿವಕುಮಾರ್‌ನನ್ನು ಆತನ ಮನೆಯ ಬಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾರತಿ ನಗರ ಪೊಲೀಸರು ಬೈರತಿ ಬಸವರಾಜ್ ಅವರನ್ನು ಐದನೇ ಆರೋಪಿ ಎಂದು ಹೆಸರಿಸಿದ್ದರು. ಬಸವರಾಜ್ ಈ ಹತ್ಯೆಗೆ ತನಗೆ ಯಾವುದೇ ಸಂಬಂಧವಿಲ್ಲ ಮತ್ತು ಮೃತನ ಪರಿಚಯವೂ ಇಲ್ಲ ಎಂದು ಹೇಳಿ, ಎಫ್‌ಐಆರ್ ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದಾಗ ಹೈಕೋರ್ಟ್ ಅವರಿಗೆ ಮಧ್ಯಂತರ ರಕ್ಷಣೆ ನೀಡಿತ್ತು.

ಬುಧವಾರ ನಡೆದ ವಿಚಾರಣೆಯ ವೇಳೆ, ಹೆಚ್ಚುವರಿ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ನ್ಯಾಯಾಲಯಕ್ಕೆ, ಈ ಪ್ರಕರಣದ ಇತರ ಆರೋಪಿಗಳ ಮೇಲೆ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಬಸವರಾಜ್ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಅವಶ್ಯಕತೆ ಇದೆ ಎಂದು ಅವರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.

You cannot copy content of this page

Exit mobile version