Home ಬ್ರೇಕಿಂಗ್ ಸುದ್ದಿ ಪೌರಕಾರ್ಮಿಕರು ದೇಶದ ನೈಜ ನಿರ್ಮಾತೃಗಳು ಹಾಗೂ ಆರೋಗ್ಯವನ್ನು ಕಾಪಾಡುವ ಕಾಯಕಯೋಗಿಗಳು – ಸಿಎಂ ಡಿಕೆ ಶಿವಕುಮಾರ್

ಪೌರಕಾರ್ಮಿಕರು ದೇಶದ ನೈಜ ನಿರ್ಮಾತೃಗಳು ಹಾಗೂ ಆರೋಗ್ಯವನ್ನು ಕಾಪಾಡುವ ಕಾಯಕಯೋಗಿಗಳು – ಸಿಎಂ ಡಿಕೆ ಶಿವಕುಮಾರ್

0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಹಲವು ಕಾರ್ಮಿಕರನ್ನು ಸನ್ಮಾನಿಸಿದರು. ಈ ವೇಳೆ ಮಾಧ್ಯಮಗಳಿಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಪೌರಕಾರ್ಮಿಕರು ದೇಶದ ನೈಜ ನಿರ್ಮಾತೃಗಳು ಹಾಗೂ ಸಮಾಜದ ಸ್ವಚ್ಛತೆ ಮತ್ತು ಆರೋಗ್ಯವನ್ನು ಕಾಪಾಡುವ ಕಾಯಕಯೋಗಿಗಳು ಎಂದು ಬಣ್ಣಿಸಿದ್ದಾರೆ. ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಸ್ವತಃ ಪೌರಕಾರ್ಮಿಕರ ಸಮವಸ್ತ್ರ ಧರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಯಾವುದೇ ಜಾತಿ, ಧರ್ಮ ಅಥವಾ ವರ್ಗದ ತಾರತಮ್ಯವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಗೌರವ ನೀಡಬೇಕೆಂಬುದು ಕಾಂಗ್ರೆಸ್ ಸರ್ಕಾರದ ಆಶಯವಾಗಿದೆ ಎಂದು ಹೇಳಿದರು. ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಹಾಗೂ ಅವರ ಬದುಕಿಗೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಡಿ.ಕೆ. ಶಿವಕುಮಾರ್, ಇವರ ಹಿತರಕ್ಷಣೆಗಾಗಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗುವುದು ಎಂದರು. ನಗರಾಭಿವೃದ್ಧಿ, ಸಮಾಜ ಕಲ್ಯಾಣ ಹಾಗೂ ಇತರ ಸಂಬಂಧಿತ ಇಲಾಖೆಗಳೊಂದಿಗೆ ಚರ್ಚಿಸಿ, ಪೌರಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳು ಮತ್ತು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ರಾಷ್ಟ್ರೀಯ ರಾಜಕೀಯ ಮತ್ತು ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಿಪಕ್ಷಗಳ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರಶ್ನಿಸುವ ಮತ್ತು ಧ್ವನಿ ಎತ್ತುವ ಹಕ್ಕಿದೆ ಎಂದು ಪ್ರತಿಪಾದಿಸಿದ ಅವರು, ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಅನುದಾನ ಮತ್ತು ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ ಎಂದು ಮಾಹಿತಿ ನೀಡಿದ

You cannot copy content of this page

Exit mobile version