Home ಇನ್ನಷ್ಟು ಕೋರ್ಟು - ಕಾನೂನು ವಿದ್ಯಾರ್ಥಿ ಪ್ರತಿಭಟನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಮಾಧ್ಯಮಗಳು ಸುಳ್ಳು ವರದಿ ಮಾಡಿವೆ:...

ವಿದ್ಯಾರ್ಥಿ ಪ್ರತಿಭಟನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಮಾಧ್ಯಮಗಳು ಸುಳ್ಳು ವರದಿ ಮಾಡಿವೆ: ಸಿಜೆಐ ಸೂರ್ಯಕಾಂತ್

0

ವಿದ್ಯಾರ್ಥಿ ಪ್ರತಿಭಟನೆಯ ಮೇಲಿನ ಪೊಲೀಸ್ ಕ್ರಮದ ವಿರುದ್ಧದ ಅರ್ಜಿಯನ್ನು ಪಟ್ಟಿ ಮಾಡಲು (ಲಿಸ್ಟಿಂಗ್) ನಿರಾಕರಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರು ಶುಕ್ರವಾರ ಬಹಿರಂಗವಾಗಿ ಖಂಡಿಸಿದ್ದಾರೆ. ಇಂತಹ ವರದಿಗಳು ಸಂಪೂರ್ಣವಾಗಿ ಸುಳ್ಳು, ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಕೂಡಿವೆ ಎಂದು ಅವರು ಹೇಳಿದ್ದಾರೆ.

ವಿಚಾರಣೆ ವೇಳೆ ಸ್ಪಷ್ಟನೆ ನೀಡಿದ ಸಿಜೆಐ ಸೂರ್ಯಕಾಂತ್, ಸುಪ್ರೀಂ ಕೋರ್ಟ್‌ನಲ್ಲಿ ಈ ಸಂಬಂಧ ಯಾವುದೇ ರಿಟ್ ಅರ್ಜಿ ಸಲ್ಲಿಕೆಯಾಗಿರಲಿಲ್ಲ ಎಂದು ತಿಳಿಸಿದರು. ಬೆಳಿಗ್ಗೆ 10 ಗಂಟೆಯವರೆಗೆ ನ್ಯಾಯಾಲಯದ ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಪುಟವೂ ಸಲ್ಲಿಕೆಯಾಗಿರಲಿಲ್ಲ ಎಂದು ಅವರು ಹೇಳಿದರು.

ಮುಖ್ಯ ನ್ಯಾಯಮೂರ್ತಿಗಳು, ಯಾರೋ ಒಬ್ಬ ವ್ಯಕ್ತಿ ಕಳುಹಿಸಿದ ಮನವಿ (Representation) ಮಾತ್ರ ತಲುಪಿತ್ತು ಎಂದ ಅವರು, “ಒಂದು ಮನವಿಯನ್ನು ನಾನು ರಿಟ್ ಅರ್ಜಿ ಎಂದು ಪರಿಗಣಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು.

ಮಾಧ್ಯಮಗಳ ವರದಿಗಾರಿಕೆಯ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ, ಪ್ರಕರಣವನ್ನು ಪಟ್ಟಿ ಮಾಡಲು ನಿರಾಕರಿಸಿದ್ದೇನೆ ಎಂದು ಕಳೆದ ಎರಡು ದಿನಗಳಿಂದ ಸುಳ್ಳು ಪ್ರಚಾರ ಮಾಡಲಾಗಿದೆ ಎಂದರು. ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಈ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುವುದು ಬೇಜವಾಬ್ದಾರಿಯ ಮತ್ತು ನಿರ್ಲಕ್ಷ್ಯದ ಪತ್ರಿಕೋದ್ಯಮ ಎಂದು ಅವರು ಕಿಡಿಕಾರಿದರು.

You cannot copy content of this page

Exit mobile version