Friday, June 14, 2024

ಸತ್ಯ | ನ್ಯಾಯ |ಧರ್ಮ

ಮುಸ್ಲಿಂ ಮಹಿಳೆಯರೊಡನೆ ರಾಖಿ ಹಬ್ಬ ಮಾಡಿ: ಮೋದಿ

ನವದೆಹಲಿ : ತ್ರಿವಳಿ ತಲಾಖ್ ಅನ್ನು ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಿಗೆ ಸುರಕ್ಷತಾ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಇಂತಹದ್ದೊಂದು ಹೇಳಿಕೆ ಬಂದಿರುವುದು ಮೋದಿಯವರ ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ.

2024ರ ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರ ರಾತ್ರಿ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರ ಸಭೆಯನ್ನು ನಡೆಸಿದ್ದು, ಈ ವೇಳೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.

ಸಮಾಜದ ಪ್ರತಿಯೊಂದು ವರ್ಗದವರೊಂದಿಗೆ ಸಂಪರ್ಕ ಸಾಧಿಸುವುದು ಅತ್ಯಗತ್ಯ. ಮುಸ್ಲಿಂ ಪುರುಷರು ತಮ್ಮ ಪತ್ನಿಯರಿಗೆ ತ್ವರಿತವಾಗಿ ನೀಡುವ ವಿಚ್ಛೇದನದ ಪದ್ಧತಿಯನ್ನು ಈ ಸರ್ಕಾರ ಅಪರಾಧ ಎಂದು ಪರಿಗಣಿಸಿದೆ. ಈ ನಿರ್ಧಾರ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚಿನ ಧೈರ್ಯ ತುಂಬಿದೆ. ಈ ಬಾರಿಯ ರಕ್ಷಾ ಬಂಧನದ ಸಮಯದಲ್ಲಿ ಈ ಅಲ್ಪಸಂಖ್ಯಾತ ಮಹಿಳೆಯರನ್ನು ತಲುಪುವ ಕೆಲಸ ಆಗಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಿಗೆ ಸೂಚನೆ ನೀಡಿದ್ದಾರೆ.

2019 ರಲ್ಲಿ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ. ಮುಸ್ಲಿಮರ ತ್ರಿವಳಿ ತಲಾಖ್ ಅಭ್ಯಾಸವನ್ನು ಕಾನೂನು ಬಾಹಿರ ಹಾಗೂ ಪತಿಗೆ ಜೈಲು ಶಿಕ್ಷೆ ವಿಧಿಸುವ ಅಪರಾಧ ಎಂದು ಘೋಷಿಸಿದೆ.

ಈ ಬಾರಿ ಆಗಸ್ಟ್‌ 30ರಂದು ರಕ್ಷಾಬಂಧನ ಆಚರಣೆ ನಡೆಯಲಿದೆ

Related Articles

ಇತ್ತೀಚಿನ ಸುದ್ದಿಗಳು