Tuesday, January 27, 2026

ಸತ್ಯ | ನ್ಯಾಯ |ಧರ್ಮ

ಯಶ್ ಅಭಿಮಾನಿಗಳ ದುರ್ಮರಣ : ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದಂದು ಬ್ಯಾನರ್ ಕಟ್ಟುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಮೃತರ ಬಗ್ಗೆ ಬರೆದುಕೊಂಡಿದ್ದು, “ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಚಿತ್ರನಟ ಯಶ್ ಅವರ ಜನ್ಮದಿನದ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಅಷ್ಟೆ ಅಲ್ಲದೆ “ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಇತ್ತ ರಾಕಿಂಗ್ ಸ್ಟಾರ್ ಯಶ್ ಕೂಡಾ ತಮ್ಮೆಲ್ಲಾ ತುರ್ತು ಕಾರ್ಯಗಳನ್ನು ಬದಿಗೊತ್ತಿ ಗದಗದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಭಿಮಾನಿಗಳ ದಂಡೇ ನಟ ಯಶ್ ಅವರನ್ನು ಕಾಣಲು ನೆರೆದಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page