ಚಿತ್ರದುರ್ಗ : ಚಿತ್ರದುರ್ಗದಲ್ಲಿ (Chitradurga) ಸಂಭವಿಸಿದ ಭೀಕರ ಬಸ್ ದುರಂತಕ್ಕೆ (Bus Tragedy) ಈಗಾಗ್ಲೇ 9 ಮಂದಿ ಸಾವನ್ನಪ್ಪಿದ್ದು, ಅನೇಕ ಜನರು ಗಾಯಗೊಂಡಿದ್ದಾರೆ.
ಸದ್ಯ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡೋಕೆ ಸರ್ಕಾರ ತೀರ್ಮಾನ ಮಾಡಿದೆ.
https://x.com/siddaramaiah/status/2004064484256895278?ref_src=twsrc%5Etfw%7Ctwcamp%5Etweetembed%7Ctwterm%5E2004064484256895278%7Ctwgr%5E695e9bea8e1b94e1b64b9abc9dcf9e13adccfdb6%7Ctwcon%5Es1_&ref_url=https%3A%2F%2Fnavasamaja.com%2Fsiddaramaiah-condoles-chitradurga-bus-tragedy-announces-compensation%2F
ಘಟನೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
