Tuesday, November 25, 2025

ಸತ್ಯ | ನ್ಯಾಯ |ಧರ್ಮ

ಅಂಧ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡಕ್ಕೆ ಬಹುಮಾನ ಮತ್ತು ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಬೆಂಗಳೂರು : ವಿಶ್ವಕಪ್ (World Cup) ವಿಜೇತ ಭಾರತದ (Team india) ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ (Blinds Cricket) ಶುಭ ಹಾರೈಸಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ (CM Siddaramaiah)ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page