Saturday, September 13, 2025

ಸತ್ಯ | ನ್ಯಾಯ |ಧರ್ಮ

ಹಾಸನ ದುರಂತ ಮೃತರಿಗೆ ಸಿ.ಎಂ 5 ಲಕ್ಷ ಪರಿಹಾರ ಘೋಷಣೆ, ಕಾರಣನಾದ ಚಾಲಕ ಭುವನೇಶ್‌ ವಶಕ್ಕೆ

ಹಾಸನ : ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಪೊಲೀಸರ ನಿರ್ಲಕ್ಷ್ಯವೇ ಕಾರಣ

‘ಈ ದುರ್ಘಟನೆಯ ಸಂಪೂರ್ಣ ಜವಾಬ್ದಾರಿಯನ್ನ ಪೊಲೀಸ್‌ ಅಧಿಕಾರಿಗಳ ವೈಫಲ್ಯದಿಂದ ನಡೆದಿದೆ. ಅದರೊಂದಿಗೆ ಲಾರಿ ಚಾಲಕ ಅತಿವೇಗದಿಂದ ಬಂದು ಈ ಘಟನೆ ನಡೆದಿದೆ. ಸುಮಾರು 500 ಮೀಟರ್‌ ದೂರದಲ್ಲೇ ಬ್ಯಾರಿಕೇಡ್‌ ಹಾಕಿ, ಎಲ್ಲಾ ವಾಹನಗಳನ್ನು ನಿಲ್ಲಿಸಿ, ಪೊಲೀಸರು ನಿಂತಿದ್ದರೆ ಈ ಘಟನೆ ಆಗುತ್ತಿರಲಿಲ್ಲ. ಈ ವಿಷಯದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತನಾಡುತ್ತೇನೆ. ಸಾವು ಕಂಡ ವ್ಯಕ್ತಿಗಳ ಕುಟುಂಬಕ್ಕೆ ಕನಿಷ್ಠ 15 ರಿಂದ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ ಎಂದು ಎಚ್‌ಡಿ ರೇವಣ್ಣ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page