Home ರಾಜ್ಯ ಮೈಸೂರು ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ

ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ

0

ಮೈಸೂರು,ಅಕ್ಟೋಬರ್ 3 : ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು,ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರಧಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಹಂ.ಪಾ .ನಾಗರಾಜಯ್ಯ ನವರಿಂದ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ದಸರಾ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ ಎಂದರು.

ಮೈಸೂರು ಸಾಂಸ್ಕೃತಿಕ ನಗರ

ಮೈಸೂರನ್ನು ಸಾಂಸ್ಕೃತಿಕ ನಗರ ಎಂದು ಗುರುತಿಸಲಾಗುತ್ತದೆ. ರಾಜರ ಕಾಲದಿಂದಲೂ ಕೂಡ ಸಂಗೀತ, ನಾಟ್ಯ, ವಿವಿಧ ಕಲೆಗಳಿಗೆ ಪ್ರೋತ್ಸಾಹಿಸಲಾಗುತ್ತಿತ್ತು. ಈ ಪರಂಪರೆಯನ್ನು ಸರ್ಕಾರವೂ ಮುಂದುವರೆಸಿಕೊಂಡು ಬಂದಿದೆ. ಸಂಗೀತ ಸಾಹಿತ್ಯ ಕಲೆಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಅಪ್ರತಿಮ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಕರ್ತವ್ಯ. ಈ ಬಾರಿ ಸರ್ಕಾರ ದಸರಾ ಉತ್ಸವವನ್ನು ವೈಭವಯುತವಾಗಿ ಆಯೋಜಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

You cannot copy content of this page

Exit mobile version