Thursday, April 17, 2025

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿಗೆ ಕಾವೇರಿ ನೀರು: ಸಿಎಂ ನೇತ್ರತ್ವದಲ್ಲಿ ಸಭೆ

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮುಂದಿನ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.


ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ನಾಗೇಂದ್ರ , ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿ ಸಂಬಂಧಪಟ್ಟ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.

ಮೊನ್ನೆಯಷ್ಟೇ ಪ್ರಾಧಿಕಾರದ ಆದೇಶದಂತೆ ನೀರು ಹರಿಸಿ, ಕೋಟಾ ಮುಗಿದ ನಂತರ ನೀರು ನಿಲ್ಲಿಸಲಾಗಿತ್ತು. ಈಗ ಮತ್ತೆ ನೀರು ಬಿಡುವಂತೆ ಪ್ರಾಧಿಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ.

ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಡನೆ ಚರ್ಚಿಸಿ ಮುಖ್ಯಮಂತ್ರಿಯವರು ಮುಂದಿನ ತೀರ್ಮಾನಕ್ಕೆ ಬರಲಿದ್ದಾರೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page