Saturday, April 12, 2025

ಸತ್ಯ | ನ್ಯಾಯ |ಧರ್ಮ

ಮುಖ್ಯಮಂತ್ರಿ ಪದವಿ ಉಳಿಸಿಕೊಳ್ಳುವ ಸಲುವಾಗಿ ಸಿದ್ದರಾಮಯ್ಯ ಜಾತಿಗಣತಿ ವರದಿ ಜಾರಿ ಡ್ರಾಮಾ ಶುರು ಮಾಡಿದ್ದಾರೆ: ಎಚ್‌ಡಿಕೆ

ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಿದೆ. ಇದೀಗ ಏಪ್ರಿಲ್ 17ರಂದು ಮತ್ತೊಂದು ವಿಶೇಷ ಸಂಪುಟ ಸಭೆ ಕರೆದಿದ್ದು ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿ ಮಾಡುವ ಕುರಿತು ಚರ್ಚೆ ಮಾಡಲಾಗುತ್ತದೆ.

ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಎನ್ನುವ ನಾಟಕ ಶುರು ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಮುಖ್ಯಮಂತ್ರಿ ರಾಜ್ಯವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ.ಈ ಒಂದು ಜಾತಿ ಗಣತಿಗೆ ಅರ್ಥವೇ ಇಲ್ಲ. ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಕಳೆದಿದೆ. 10 ವರ್ಷಗಳಿಂದ ವರದಿ ಲಭ್ಯವಿದ್ದರೂ ಏಕೆ ಜಾರಿ ಮಾಡಿರಲಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಎರಡು ವರ್ಷ ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಶಕ್ತಿಯನ್ನು ವೃದ್ಧಿ ಮಾಡಿದ್ದೇವೆ ಅಂತ ಹೇಳ್ತಾರೆ. ಇದೆಲ್ಲ ಕೇವಲ ಜಾತಿ ಜಾತಿ ಮಧ್ಯ ಸಂಘರ್ಷ ಉಂಟು ಮಾಡಲಿಕ್ಕೆ. ಸಿದ್ದರಾಮಯ್ಯ ರಾಜ್ಯವನ್ನು ಸರ್ವನಾಶ ಮಾಡಲಿಕ್ಕೆ ಹೊರಟಿದ್ದಾರೆ.

ಜಾತಿ ಹೆಸರಿನಲ್ಲಿ ಜಾತಿ ಸಂಘರ್ಷಕ್ಕೆ ಏನು ವೇದಿಕೆ ಸಿದ್ಧ ಮಾಡಬೇಕು ಅದನ್ನು ಮಾಡಲು ಹೊರಟಿದ್ದಾರೆ. ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತಲ್ಲ ಅವಾಗ ಜಾತಿ ಗಣತಿ ತರಲಿಲ್ಲ. ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಈಗ ಡ್ರಾಮಾ ಪ್ರಾರಂಭ ಮಾಡಿದ್ದಾರೆ ಎಂದು ಸಚಿವ ಕಿಡಿ ಕಾರಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page