Home ಬ್ರೇಕಿಂಗ್ ಸುದ್ದಿ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ; ಸಧ್ಯಕ್ಕೆ ಯಾವುದೇ...

ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ; ಸಧ್ಯಕ್ಕೆ ಯಾವುದೇ ಆತಂಕವಿಲ್ಲ..

0

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರ ರಾಜಕೀಯದ ರೂಪ ಪಡೆದುಕೊಂಡು ಆರೋಪ ಪ್ರತ್ಯಾರೋಪಗಳಿಗೆ ದಾರಿಯಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ. ಅದರಂತೆ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ಕೂಡ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಬಿಪಿಎಲ್ ಕಾರ್ಡ್​ ರದ್ದಾಗಿದ್ದ ಸಾರ್ವಜನಿಕರು ಮಾಧ್ಯಮಗಳ ಮೂಲಕ ಬಹಿರಂಗವಾಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೇ ಅಸ್ತ್ರವಾಗಿಸಿಕೊಂಡ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಜನರು ಮತ್ತಷ್ಟು ತಿರುಗಿ ಬೀಳುವಂತೆ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಇಷ್ಟೂ ಬೆಳವಣಿಗೆ ಸರ್ಕಾರಕ್ಕೆ ದೊಡ್ಡ ಮುಜುಗರ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ’ ಎಚ್ವರಿಕೆ ನೀಡಿದ್ದಾರೆ.

ಕಳೆದ ಆಗಸ್ಟ್​ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್​ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್​ ಕಾರ್ಡ್​​ಗಳನ್ನು ರದ್ದು ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟುದವರ ಕುಟುಂಬಗಳ ಬಿಪಿಎಲ್​ ಕಾರ್ಡ್​ಗಳು ಸಹ ರಿಜೆಕ್ಟ್ ಆಗಿವೆ. ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿ ನಾಯಕರು ಇದನ್ನೇ ಅಸ್ತ್ರ ಓಡಸಿಕೊಂಡು ರದ್ದಾದ ಬಿಪಿಎಲ್ ಕಾರ್ಡ್ ಅವರ ಬಳಿ ತೆರಳಿ ಸರ್ಕಾರದ ವಿರುದ್ಧ ಸಮರ ಸಾರುವ ಬಗ್ಗೆ ಜನಾಂದೋಲನಕ್ಕೆ ಕರೆ ನೀಡುತ್ತಿದ್ದರೆ, ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಿಳಿದ ಸಿದ್ದರಾಮಯ್ಯ, ಕಾರ್ಡ್​ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಅಲ್ಲದೇ ವಿನಾಕಾರಣ ರದ್ದು ಮಾಡಿದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಇನ್ನು ಈಗಾಗೇ ರದ್ದಾಗಿರುವ ಬಿಪಿಎಲ್ ಕಾರ್ಡ್​ಗಳನ್ನು ಸಂಬಂಧಪಟ್ಟವರಿಗೆ ಸರಿ ಮಾಡಿ ವಾಪಸ್ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

You cannot copy content of this page

Exit mobile version