Home ಬ್ರೇಕಿಂಗ್ ಸುದ್ದಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದತಿಗೆ ಸಿಎಂ ಒತ್ತಾಯ; ಕೇಂದ್ರ ಸ್ಪಂದಿಸದಿದ್ದರೆ ಕಾನೂನು ಹೋರಾಟ!

ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದತಿಗೆ ಸಿಎಂ ಒತ್ತಾಯ; ಕೇಂದ್ರ ಸ್ಪಂದಿಸದಿದ್ದರೆ ಕಾನೂನು ಹೋರಾಟ!

0

ಪ್ರಜ್ವಲ್‌ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಪ್ರಮುಖ ಆರೋಪಿ ಆಗಿರುವ ಪ್ರಜ್ವಲ್ ರೇವಣ್ಣ, ಈಗಾಗಲೇ ತಲೆ ಮರೆಸಿಕೊಂಡು ತಿಂಗಳಾಗುತ್ತಿದೆ. ರಾಜ್ಯದ ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ವಿದೇಶಕ್ಕೆ ಹಾರಿದ ಪ್ರಜ್ವಲ್ ರೇವಣ್ಣ, ಎಸ್ಐಟಿ ತನಿಖೆಗೂ ಸ್ಪಂದಿಸಿಲ್ಲ ಎಂಬ ತಕರಾರನ್ನು ಹೊರ ಹಾಕಿದೆ. ಈ ಸಂಬಂಧ ಈ ಕೂಡಲೇ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ಧು ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತಂದು ಅವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮೂಲಗಳ ಪ್ರಕಾರ, ಕರ್ನಾಟಕ ಸರ್ಕಾರದ ಪತ್ರಕ್ಕೆ ವಿದೇಶಾಂಗ ಸಚಿವಾಲಯ ಸ್ಪಂದಿಸಿದೆ. ಈ ವಿಷಯದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಪ್ರಜ್ವಲ್ ರೇವಣ್ಣ ಏಪ್ರಿಲ್ 27ರಂದು ರಾಜತಾಂತ್ರಿಕ ಪಾಸ್ಪೋರ್ಟ್ನೊಂದಿಗೆ ಜರ್ಮನಿಯಿಂದ ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಅದೂ ಅವನ ಅಸಹ್ಯಕರ ಕೃತ್ಯಗಳ ಸುದ್ದಿ ಹೊರಬಂದ ನಂತರ. ಕೆಲವು ಗಂಟೆಗಳ ನಂತರ, ಅವರ ವಿರುದ್ಧ ಎಫ್‌ಐಆರ್ ಸಹ ದಾಖಲಿಸಲಾಗಿದೆ.”


ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ, ಕಾನೂನಿನ ಪ್ರಕಾರ ಸಹಾಯವನ್ನು ವಿಸ್ತರಿಸುವುದು ಮತ್ತು ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ರದ್ದುಗೊಳಿಸುವುದು ಕೇಂದ್ರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದರು.

ಸಧ್ಯ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವುದು ಈಗ ಕೇಂದ್ರ ಸರ್ಕಾರದ ನಿರ್ಧಾರವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಸ್ಪೋರ್ಟ್ ರದ್ಧು ಮಾಡದೇ ಹೋದರೆ, ಕರ್ನಾಟಕ ಸರ್ಕಾರ ಕಾನೂನಾತ್ಮಕವಾಗಿ ಅದನ್ನು ರದ್ದು ಮಾಡುವ ಸಾಧ್ಯತೆಗೆ ಕೈ ಹಾಕಬಹುದು ಎಂದು ಅಂದಾಜಿಸಲಾಗಿದೆ.

You cannot copy content of this page

Exit mobile version