Saturday, December 28, 2024

ಸತ್ಯ | ನ್ಯಾಯ |ಧರ್ಮ

ಇಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ. ದೆಹಲಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮನಮೋಹನ್​ ಸಿಂಗ್​ ನಿಧನಕ್ಕೆ ಇಡೀ ದೇಶವೇ ಕಂಬನಿ ಮುಡಿಯುತ್ತಿದ್ದು, ಗಣ್ಯಾತಿಗಣ್ಯರು ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿ ತಲುಪಿದ್ದು, ದೇಶದ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞನಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ಸದ್ಯ ಮಾಜಿ ಪ್ರಧಾನಿಯ ಪ್ರಾರ್ಥಿವ ಶರೀರವು ಅವರ ಸ್ವಗೃಹದಲ್ಲೇ ಇದ್ದು. ಬೆಳಗ್ಗೆ 8 ಗಂಟೆ ಸುಮಾರಿಗೆ ಕಾಂಗ್ರೆಸ್​ ಕಚೇರಿಗೆ ಸ್ಥಳಾಂತರವಾಗಲಿದೆ. ಅಲ್ಲಿ ಕಾಂಗ್ರೆಸ್​ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಲಿದ್ದು, ಬಳಿಕ ಬೆಳಗ್ಗೆ 9.30ಕ್ಕೆ ದೆಹಲಿಯ ಕಾಂಗ್ರೆಸ್​ ಪ್ರಧಾನ ಕಚೇರಿಯಿಂದ ಮನಮೋಹನ್​ ಸಿಂಗ್​ ಅವರ ಅಂತಿಮ ಯಾತ್ರೆ ನಡೆಯಲಿದೆ.

ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page