Home ರಾಜ್ಯ ಮೈಸೂರು GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ...

GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

0

ಮೈಸೂರು ಸೆ 22: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.

ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

You cannot copy content of this page

Exit mobile version