ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ತಮ್ಮ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೈಕೋರ್ಟ್ ಮೊರೆ ಹೋಗಲಿದ್ದಾರೆ ಎಂದು ವಿವಿಧ ಮಾಧ್ಯಮ ವರದಿಗಳು ತಿಳಿಸಿವೆ.
ಮೂವರು ಕಾರ್ಯಕರ್ತರಾದ ಟಿ ಜೆ ಅಬ್ರಹಾಂ, ಪ್ರದೀಪ್ ಎಸ್ ಪಿ ಮತ್ತು ಸ್ನೇಹಮಯಿ ಕೃಷ್ಣ ಅವರ ದೂರುಗಳ ಆಧಾರದ ಮೇಲೆ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಗೆಹ್ಲೋಟ್ ಶನಿವಾರ ಅನುಮತಿ ನೀಡಿದ್ದರು.
ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ಐಷಾರಾಮಿ ಬಡಾವಣೆಗಳಲ್ಲಿ ಪತ್ನಿ ಪಾರ್ವತಿ ಅವರಿಗೆ ಪರ್ಯಾಯ ನಿವೇಶನ ಪಡೆಯಲು ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸಚಿವ ಸಂಪುಟ ಶನಿವಾರ ಮುಖ್ಯಮಂತ್ರಿಯವರಿಗೆ ತಮ್ಮ ಬೆಂಬಲವನ್ನು ಘೋಷಿಸುವ ಜೊತೆಗೆ ಅವರು ರಾಜೀನಾಮೆ ನೀಡಬೇಕೆನ್ನುವ ವಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿವೆ.