ಮುಂಬರುವ ಕ್ಯಾಬಿನೆಟ್ ಸಭೆಯಲ್ಲಿ ಜಾತಿಗಣತಿ ವರದಿ ಜಾರಿ ಕುರಿತು ಚರ್ಚೆ ಸಾಧ್ಯತೆ ಇದ್ದು, ಸಚಿವ ಸಂಪುಟದ ಮುಂದೆ ವರದಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡೆಯಿಂದ ಸೂಚನೆ ನೀಡಲಾಗಿದೆ.
ಜಾತಿ ಗಣತಿ ವರದಿ ಬಗ್ಗೆ ಸಚಿವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಇದರ ಜೊತೆಗೆ ಕಾನೂನು ಇಲಾಖೆ ಸಲಹೆ ಪಡೆಯಲು ಬಹುತೇಕ ತೀರ್ಮಾನಿಸಲಾಗಿದ್ದು, ಸಚಿವ ಸಂಪುಟ ಸಮಿತಿ ರಚನೆ ಮಾಡಿ ಮುಂದಿನ ನಿರ್ಧಾರ ತಗೆದುಕೊಳಾಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಾತಿಗಣತಿ ವರದಿ ಜಾರಿ ಮಾಡುವ ಕುರಿತಂತೆ ಮುಂದಿನ ಸಂಪುಟ ಸಭೆಯಲ್ಲಿ ಅಂದರೆ ಜನವರಿ 16 ರಂದೇ ಈ ಒಂದು ಜಾತಿಗಣತಿ ವರದಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಲಾಗಿದೆ.
ಈಗಾಗಲೇ ಜಯಪ್ರಕಾಶ್ ಹೆಗಡೆಯವರು ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಸಂಪುಟ ಉಪ ಸಮಿತಿ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿ, ಸಂಪುಟ ಉಪ ಸಮಿತಿ ರಚನೆ ಮಾಡಿ, ಜಾತಿಗಣತಿ ವರದಿ ಜಾರಿಯಾಗುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.