ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ಸಮಸ್ಯೆ ಹಿನ್ನೆಲೆ ಅವರು ಪ್ರಸ್ತುತ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಾ. ಬಿ.ಸಿ. ಶ್ರೀನಿವಾಸ್ ಅವರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಪತ್ನಿಯ ಶ್ವಾಸಕೋಶದಲ್ಲಿ ನೀರು ತುಂಬಿರುವ ಕುರಿತು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆ ಉಂಟಾಗಿ ತಕ್ಷಣ ಆಸ್ಪತ್ರೆಯಲ್ಲಿ ದಾಖಲಿಸುವ ಅಗತ್ಯವಾಯಿತು.
ಪತ್ನಿಯ ಆರೋಗ್ಯದ ಕುರಿತು ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡುತ್ತಾ, “ನಾಳೆವರೆಗೆ ಆಸ್ಪತ್ರೆಗೆ ಅಡ್ಮಿಟ್ ಇರಲು ವೈದ್ಯರು ಹೇಳಿದ್ದಾರೆ. ವೈದ್ಯರ ತಂಡ ತಾಯಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ,” ಎಂದು ಹೇಳಿದರು.
ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಪ್ರಮುಖ ರಾಜಕೀಯ ವಿಚಾರಗಳ ಕುರಿತು ಚರ್ಚಿಸಲು ದೆಹಲಿಯಲ್ಲಿದ್ದಾರೆ. ಆದರೆ ಅವರು ಬೇಗನೇ ಬೆಂಗಳೂರಿಗೆ ಹಿಂದಿರುಗಿ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಬರಲಿದ್ದಾರೆ ಎಂಬ ಮಾಹಿತಿ ದೊರೆತಿದೆ.
