Home ದೇಶ ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಕೇರಳದ ಅರ್ಜುನ್ ದೇಹ ಪತ್ತೆ ಹಚ್ಚುವಲ್ಲಿ ರಾಜ್ಯಸರ್ಕಾರ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಕೇರಳದ ಅರ್ಜುನ್ ದೇಹ ಪತ್ತೆ ಹಚ್ಚುವಲ್ಲಿ ರಾಜ್ಯಸರ್ಕಾರ ಯಶಸ್ವಿ: ಸಿಎಂ ಸಿದ್ದರಾಮಯ್ಯ

0

ಕೇರಳ(ಕಾಲಿಕಟ್): ಸೆಪ್ಟೆಂಬರ್ 25: ಶಿರೂರಿನ ಭೂ ಕುಸಿತದಲ್ಲಿ ಮೃತಪಟ್ಟಿದ್ದ ಕೇರಳದ ಅರ್ಜುನ್ ಅವರ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಕೇರಳದ ಕ್ಯಾಲಿಕಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಿರೂರು ಭೂಕುಸಿತದಲ್ಲಿ ಅರ್ಜುನ್ ಮತ್ತು ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು.
ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ನೀಲಂಬೂರು ನಗರದಲ್ಲಿ ಆರ್ಯದನ್ ಮೊಹಮ್ಮದ್ ಸಂಸ್ಮರಣಾ ಸಮಿತಿ ಅಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು‌.

ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕರೂ, ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ವಿ.ಡಿ.ಸತೀಶನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಂಸದರಾದ ಕುಂಜಲಿಕುಟ್ಟಿ, ಅಬ್ದುಲ್ ಸಮದ್, ಮುಹಮದ್ ಹಮ್ದುಲ್ಲಾ ಸಯೀದ್, ವಿಷ್ಣುನಾಥ್ ಸೇರಿ ಕೇರಳ ಯುವ ಕಾಂಗ್ರೆಸ್ ಮುಖಂಡರು ಮತ್ತು ಹಲವು ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

You cannot copy content of this page

Exit mobile version