ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಕುರಿತು ಲೋಕಾಯುಕ್ತ ತನಿಖೆಗೆ ಅದೇಶಿಸಲಾಗಿದೆ. ತನಿಖೆ ನಡೆಯಲಿ, ನಂತರ ಸತ್ಯ ತಿಳಿಯಲಿದೆ. ಸಿದ್ದರಾಮಯ್ಯ ಅವರದು ಇದರಲ್ಲಿ ಏನೂ ಪಾತ್ರ ಇಲ್ಲ ಎಂದು ಹೇಳಿದ್ದಾರೆ.
ಹೈಕೋರ್ಟಿನಲ್ಲೂ ವಿಚಾರಣೆಗೆ ಅನುಮತಿ ಕೊಟ್ಟಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತನಿಖೆಗೆ ಆದೇಶ ಬಂದಿದೆ. ನಾವು ತನಿಖೆಗೆ ಸಿದ್ದ ಎಂದು ಅವರು ಹೇಳಿದರು.
ಹೈಕಮಾಂಡ್ ಸಿದ್ದರಾಮಯ್ಯ ಅವರ ಜತೆ ಇದೆ. ಶಾಸಕರು, ಸಚಿವರು ಅವರ ಜತೆ ಇದ್ದೇವೆ. ರಾಜೀನಾಮೆ ಕೊಡಬೇಡಿ ಎಂದು ನಾವೆಲ್ಲರೂ ಹೇಳಿದ್ದೇವೆ. ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆ ವಾಲಾ ಸಹ ಸಿದ್ದರಾಮಯ್ಯ ರಾಜೀನಾಮೆ ಅಗತ್ಯ ಇಲ್ಲ ಎಂದು. ಕಾನೂನಾತ್ಮಕ ಹೋರಾಟ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಅವರನ್ನು ಐದು ವರ್ಷ ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಮೂಡಾ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ತಿಳಿಸಿದರು.